September 6, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನರಾಜ್ಯ ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

ಬೆಳ್ತಂಗಡಿ: ‘ಕಾಮಿಡಿ ಕಿಲಾಡಿ’ ಖ್ಯಾತಿಯ ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ರಾಕೇಶ್ ಪೂಜಾರಿ(33ವ) ಮೇ 12ರಂದು ಮುಂಜಾನೆ ನಿಧನರಾಗಿದ್ದಾರೆ.

ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.ಕನ್ನಡದ ಜನಪ್ರಿಯ ಕಾರ್ಯಕ್ರಮ ಕಾಮಿಡಿ ಕಿಲಾಡಿ -3 ವಿಜೇತರಾಗಿದ್ದ ಅವರು, ತನ್ನ ವಿಭಿನ್ನ ಅಭಿನಯದಿಂದ ಕರುನಾಡಿನ ಮನಗೆದ್ದಿದ್ದರು.

‘ಕಾಮಿಡಿ ಕಿಲಾಡಿ’ ಶೋನಲ್ಲಿ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು.ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ‘ಚೈತನ್ಯ ಕಲಾವಿದರು’ ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆಗಿದ್ದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.ರಾಕೇಶ್ ಅವರು ಕನ್ನಡ ಮತ್ತು ತುಳುವಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಕೇಶ್ ಕನ್ನಡದಲ್ಲಿ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆ‌ರ್ ಪೊಲೀಸ್’, ‘ಪಮ್ಮನ್ನೆ ದಿ ಗ್ರೇಟ್’, ‘ಉಮಿಲ್’, ‘ಇಲ್ಲೋಕ್ಕೆಲ್‌’ ಸೇರಿದಂತೆ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಇನ್ನು ಕರಾವಳಿಯ ರಿಯಾಲಿಟಿ ಶೋಗಳಾದ ‘ಬಲೆ ತೇಲಿಪಾಲೆ’, ‘ಮೇ 22’, ‘ಸ್ಟಾರ್’, ‘ತುಯಿನಾಯೆ ಪೋಯೆ’ ಸೇರಿದಂತೆ ಕೆಲ ನಾಟಕಗಳಲ್ಲಿ ಅಭಿನಯಿಸಿದ್ದರು.ಕಿರುತೆರೆಯಲ್ಲಿ ರಾಕೇಶ್ ಅವರು ಜನಪ್ರಿಯತೆಯನ್ನು ಪಡೆದುಕೊಂಡಿದ್ದರು. ‘ಹಿಟ್ಲರ್ ಕಲ್ಯಾಣ’ ಎನ್ನುವ ಧಾರಾವಾಹಿಯಲ್ಲಿ ಅವರು ನಟಿಸಿದ್ದರು.

Related posts

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya
error: Content is protected !!