32.1 C
ಪುತ್ತೂರು, ಬೆಳ್ತಂಗಡಿ
May 12, 2025
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನರಾಜ್ಯ ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

ಬೆಳ್ತಂಗಡಿ: ‘ಕಾಮಿಡಿ ಕಿಲಾಡಿ’ ಖ್ಯಾತಿಯ ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ರಾಕೇಶ್ ಪೂಜಾರಿ(33ವ) ಮೇ 12ರಂದು ಮುಂಜಾನೆ ನಿಧನರಾಗಿದ್ದಾರೆ.

ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.ಕನ್ನಡದ ಜನಪ್ರಿಯ ಕಾರ್ಯಕ್ರಮ ಕಾಮಿಡಿ ಕಿಲಾಡಿ -3 ವಿಜೇತರಾಗಿದ್ದ ಅವರು, ತನ್ನ ವಿಭಿನ್ನ ಅಭಿನಯದಿಂದ ಕರುನಾಡಿನ ಮನಗೆದ್ದಿದ್ದರು.

‘ಕಾಮಿಡಿ ಕಿಲಾಡಿ’ ಶೋನಲ್ಲಿ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು.ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ‘ಚೈತನ್ಯ ಕಲಾವಿದರು’ ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆಗಿದ್ದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.ರಾಕೇಶ್ ಅವರು ಕನ್ನಡ ಮತ್ತು ತುಳುವಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಕೇಶ್ ಕನ್ನಡದಲ್ಲಿ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆ‌ರ್ ಪೊಲೀಸ್’, ‘ಪಮ್ಮನ್ನೆ ದಿ ಗ್ರೇಟ್’, ‘ಉಮಿಲ್’, ‘ಇಲ್ಲೋಕ್ಕೆಲ್‌’ ಸೇರಿದಂತೆ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಇನ್ನು ಕರಾವಳಿಯ ರಿಯಾಲಿಟಿ ಶೋಗಳಾದ ‘ಬಲೆ ತೇಲಿಪಾಲೆ’, ‘ಮೇ 22’, ‘ಸ್ಟಾರ್’, ‘ತುಯಿನಾಯೆ ಪೋಯೆ’ ಸೇರಿದಂತೆ ಕೆಲ ನಾಟಕಗಳಲ್ಲಿ ಅಭಿನಯಿಸಿದ್ದರು.ಕಿರುತೆರೆಯಲ್ಲಿ ರಾಕೇಶ್ ಅವರು ಜನಪ್ರಿಯತೆಯನ್ನು ಪಡೆದುಕೊಂಡಿದ್ದರು. ‘ಹಿಟ್ಲರ್ ಕಲ್ಯಾಣ’ ಎನ್ನುವ ಧಾರಾವಾಹಿಯಲ್ಲಿ ಅವರು ನಟಿಸಿದ್ದರು.

Related posts

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!