ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ಶೆಟ್ಟಿ (51) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.12ರಂದು ನಿಧನರಾದರು.
ವೃತ್ತಿಯಲ್ಲಿ ವಿದ್ಯುತ್ ಗುತ್ತಿಗೆದಾರರಾಗಿದ್ದ ಇವರು ಪತ್ರಿಕಾ ವಿತರಕರಾಗಿದ್ದರು.
ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದ ಇವರು ಬಿಜೆಪಿ ಗ್ರಾಮ ಸಮಿತಿಯಲ್ಲಿ ಪದಾಧಿಕಾರಿಯಾಗಿ, ಗೇರುಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಯಕ್ಷಗಾನ, ನಾಟಕ ರಂಗದಲ್ಲಿ ಕಲಾವಿದರಾಗಿದ್ದ ಇವರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಮೃತರು ತಾಯಿ, ಪತ್ನಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿರುವ ಸಂಧ್ಯಾ ಜೆ. ಶೆಟ್ಟಿ , ಪುತ್ರರಾದ ಜಿಷ್ಣು, ಜಿತ್, ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.