ಕೊಕ್ರಾಡಿ:ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಬಳಿಕ ಮಾತನಾಡಿ ಕೊಕ್ರಾಡಿ ಶಾಲೆಗೆ ಸರಕಾರದಿಂದ ರೂ1.75 ಕೋಟಿ ಅನುದಾನ ಮಂಜೂರುಗೊಳಿಸಿ ಶಾಲೆಯನ್ನು ಬೆಳಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಂ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ,ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ,ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ರಾಜೇಂದ್ರ ಕೃಷ್ಣ,ಕೊಕ್ರಾಡಿ ಹೈಸ್ಕೂಲ್ ಬೆಟರ್ ಮೆಂಟ್ ಟ್ರಸ್ಟ್ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ,ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮೋಹನ ಎ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಹೆಗ್ಡೆ,ಎಸ್.ಡಿ.ಎಂ.ಸಿ ಅಧ್ಯಕ್ಷ ಗಣೇಶ್,ಸ್ಥಾಪಕ ಮುಖ್ಯೋಪಾಧ್ಯಾಯರಾದ ಹೆಚ್.ಸಿ ಚೆನ್ನಯ್ಯ,ನಿವೃತ್ತ ಮುಖ್ಯೋಪಾಧ್ಯಾಯ ಕಾಲಪ್ಪ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.ಕಾಲೇಜಿನ ಪ್ರಾಂಶುಪಾಲದಾರ ನೋಬರ್ಟ್ ಮಾರ್ಟಿಸ್ ಸ್ಬಾಗತಿಸಿದರು.ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಮಹಮದ್ ರಿಯಾಜ್ ,ಹಳೆ ವಿದ್ಯಾರ್ಥಿಗಳು, ಅದ್ಯಾಪಕ ವೃಂದದವರು,ವಿದ್ಯಾರ್ಥಿಗಳು ಸಹಕರಿಸಿದರು.