May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಯೋಗ ಮತ್ತು ಅದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಮೀಸಲಾಗಿರುವ ಬೆಂಗಳೂರಿನ ಖ್ಯಾತ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಖಾಸಗಿ ಡೀಮ್ಡ್ ವಿಶ್ವವಿದ್ಯಾನಿಲಯ ಇದರ ಸಂಸ್ಥಾಪಕರು ಹಾಗೂ ಇದರ ಉಪಕುಲಪತಿ ಹೆಚ್. ಆರ್ ನಾಗೇಂದ್ರ ಭೇಟಿ ನೀಡಿದರು.


ಉಪಕುಲಪತಿ ಹೆಚ್. ಆರ್ ನಾಗೇಂದ್ರ ಅವರು ಆಸ್ಪತ್ರೆಯ ವೈದ್ಯರನ್ನು ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ಮಂಜುನಾಥ ಸ್ವಾಮಿಯ ಕೃಪೆ, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಡಾ| ಹೇಮಾವತಿ ಹೆಗ್ಗಡೆಯವರ ಪ್ರೇರಣೆ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅದ್ಭುತ ಸಂಸ್ಥೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಪೂಜ್ಯರು ಒಂದು ಗ್ರಾಮೀಣ ಭಾಗದಲ್ಲಿ ಈ ಆಸ್ಪತ್ರೆ ನಿರ್ಮಿಸಿರುವ ಉದ್ದೇಶ ಲಾಭಕ್ಕಲ್ಲ ಅನ್ನುವುದು ಗೊತ್ತಾಗುತ್ತದೆ. ಇಲ್ಲಿನ ವೈದ್ಯಕೀಯ ಸೇವೆ ಅಮೋಘವಾದದ್ದು. ಡಯಾಲಿಸಿಸ್ ವಿಭಾಗದಲ್ಲಿ ನೀಡುತ್ತಿರುವ ಉಚಿತ ಡಯಾಲಿಸಿಸ್ ಸೇವೆ ಹಾಗೂ ಅಲ್ಲಿ ಅಳವಡಿಸಿರುವ ವ್ಯವಸ್ಥೆಯು ಅತ್ಯುತ್ತಮವಾಗಿದೆ ಎಂದರು. ವೈದ್ಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡುತ್ತಾ, ಯೋಗ, ಪ್ರಾಣಾಯಾಮ ಮತ್ತು ಜೀವನಶೈಲಿಯ ಬದಲಾವಣೆಯಿಂದ ರೋಗ ನಿವಾರಣೆ ಸಾಧ್ಯ ಎಂದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಫೈನಾನ್ಸ್ ಡೈರೆಕ್ಟರ್ ಡಾ| ದಯಾನಂದ, ಯೋಗ ತರಬೇತುದಾರ ಡಾ| ಅಮಿತ್, ಕ್ಷೇಮವನದ ಮುಖ್ಯ ಕ್ಷೇಮಾಧಿಕಾರಿ ಡಾ| ನರೇಂದ್ರ, ಹಾಗೂ ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ವಿಭಾಗ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya
error: Content is protected !!