September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

ಬಂದಾರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಎನ್ ಭವಾನಿ ಶಂಕರ್, ತಾಲೂಕು ಪಂಚಾಯತ್ ಮೆನೇಜರ್ ಪ್ರಶಾಂತ್ ಬಳೆoಜ,ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಸಹಾಯಕ ನಿರ್ದೇಶಕರಾದ ಸಫನಾ ರವರು ಗೌರವ ಸ್ಮರಣಿಕೆ ಹಾಗೂ ಪ್ರಶoಸಾ ಪತ್ರ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ.ಜಿ, ಸಿಬ್ಬಂದಿ ಪ್ರವೀಣ್, ನರೇಗಾ ಯೋಜನೆಯ ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್) ಶರಣ್ ರೈ, ತಾಂತ್ರಿಕ ಸಹಾಯಕರಾದ ಕು. ಪ್ರಾರ್ಥನ, ಇವರುಗಳು ಪ್ರಶಸ್ತಿ ಸ್ವೀಕರಿಸಿದರು.

Related posts

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya
error: Content is protected !!