ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಯೋಗ ಮತ್ತು ಅದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಮೀಸಲಾಗಿರುವ ಬೆಂಗಳೂರಿನ ಖ್ಯಾತ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಖಾಸಗಿ ಡೀಮ್ಡ್ ವಿಶ್ವವಿದ್ಯಾನಿಲಯ ಇದರ ಸಂಸ್ಥಾಪಕರು ಹಾಗೂ ಇದರ ಉಪಕುಲಪತಿ ಹೆಚ್. ಆರ್ ನಾಗೇಂದ್ರ ಭೇಟಿ ನೀಡಿದರು.


ಉಪಕುಲಪತಿ ಹೆಚ್. ಆರ್ ನಾಗೇಂದ್ರ ಅವರು ಆಸ್ಪತ್ರೆಯ ವೈದ್ಯರನ್ನು ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ಮಂಜುನಾಥ ಸ್ವಾಮಿಯ ಕೃಪೆ, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಡಾ| ಹೇಮಾವತಿ ಹೆಗ್ಗಡೆಯವರ ಪ್ರೇರಣೆ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅದ್ಭುತ ಸಂಸ್ಥೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಪೂಜ್ಯರು ಒಂದು ಗ್ರಾಮೀಣ ಭಾಗದಲ್ಲಿ ಈ ಆಸ್ಪತ್ರೆ ನಿರ್ಮಿಸಿರುವ ಉದ್ದೇಶ ಲಾಭಕ್ಕಲ್ಲ ಅನ್ನುವುದು ಗೊತ್ತಾಗುತ್ತದೆ. ಇಲ್ಲಿನ ವೈದ್ಯಕೀಯ ಸೇವೆ ಅಮೋಘವಾದದ್ದು. ಡಯಾಲಿಸಿಸ್ ವಿಭಾಗದಲ್ಲಿ ನೀಡುತ್ತಿರುವ ಉಚಿತ ಡಯಾಲಿಸಿಸ್ ಸೇವೆ ಹಾಗೂ ಅಲ್ಲಿ ಅಳವಡಿಸಿರುವ ವ್ಯವಸ್ಥೆಯು ಅತ್ಯುತ್ತಮವಾಗಿದೆ ಎಂದರು. ವೈದ್ಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡುತ್ತಾ, ಯೋಗ, ಪ್ರಾಣಾಯಾಮ ಮತ್ತು ಜೀವನಶೈಲಿಯ ಬದಲಾವಣೆಯಿಂದ ರೋಗ ನಿವಾರಣೆ ಸಾಧ್ಯ ಎಂದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಫೈನಾನ್ಸ್ ಡೈರೆಕ್ಟರ್ ಡಾ| ದಯಾನಂದ, ಯೋಗ ತರಬೇತುದಾರ ಡಾ| ಅಮಿತ್, ಕ್ಷೇಮವನದ ಮುಖ್ಯ ಕ್ಷೇಮಾಧಿಕಾರಿ ಡಾ| ನರೇಂದ್ರ, ಹಾಗೂ ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ವಿಭಾಗ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!