ಬೆಳ್ತಂಗಡಿ: ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ “ಸುಹಾಸ್ ಶೆಟ್ಟಿ ನುಡಿ ನಮನ” ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವುದರ ಬಗ್ಗೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ಸೋಶಿಯಲ್ ಟ್ರೇಡ್ ಯೂನಿಯನ್ ಗುರುವಾಯನಕೆರೆ ಇದರ ಅಧ್ಯಕ್ಷರಾದ ಅಬ್ದುಲ್ ರಹಮಾನ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಮುಸ್ಲಿಂ ಆಟೋ ರಿಕ್ಷಾ ಚಾಲಕರ ಬಗ್ಗೆ ಹಾಗೂ ಮುಸ್ಲಿಂ ಅಂಗಡಿಯಗಳಲ್ಲಿ ವ್ಯಾಪಾರ-ವ್ಯವಹಾರ
ಮಾಡುವ ವಿಷಯದಲ್ಲಿ ಹಿಂದು-ಮುಸ್ಲಿಂ ಎಂದು ವಿಭಜಿಸಿ, ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವಂತಹ ಭಾಷಣವನ್ನು ಮಾಡಿರುವವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಧರ್ಭದಲ್ಲಿ SDTU ಘಟಕದ ಇದರ ಪದಾಧಿಕಾರಿಗಳು ಹಾಗು ಹಿರಿಯ ಆಟೋ ಚಾಲಕರು ಉಪಸ್ಥಿತರಿದ್ದರು.