May 14, 2025
Uncategorized

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

ಬೆಳ್ತಂಗಡಿ: ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ “ಸುಹಾಸ್ ಶೆಟ್ಟಿ ನುಡಿ ನಮನ” ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವುದರ ಬಗ್ಗೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ಸೋಶಿಯಲ್ ಟ್ರೇಡ್ ಯೂನಿಯನ್ ಗುರುವಾಯನಕೆರೆ ಇದರ ಅಧ್ಯಕ್ಷರಾದ ಅಬ್ದುಲ್ ರಹಮಾನ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಮುಸ್ಲಿಂ ಆಟೋ ರಿಕ್ಷಾ ಚಾಲಕರ ಬಗ್ಗೆ ಹಾಗೂ ಮುಸ್ಲಿಂ ಅಂಗಡಿಯಗಳಲ್ಲಿ ವ್ಯಾಪಾರ-ವ್ಯವಹಾರ
ಮಾಡುವ ವಿಷಯದಲ್ಲಿ ಹಿಂದು-ಮುಸ್ಲಿಂ ಎಂದು ವಿಭಜಿಸಿ, ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವಂತಹ ಭಾಷಣವನ್ನು ಮಾಡಿರುವವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಧರ್ಭದಲ್ಲಿ SDTU ಘಟಕದ ಇದರ ಪದಾಧಿಕಾರಿಗಳು ಹಾಗು ಹಿರಿಯ ಆಟೋ ಚಾಲಕರು ಉಪಸ್ಥಿತರಿದ್ದರು.

Related posts

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!