21.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಲಾಯಿಲ ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಇದರ ಸಹಯೋಗದೊಂದಿಗೆ ಮೇ 14 ರಂದು ಲಾಯಿಲ ಗ್ರಾಮ ಪಂಚಾಯತ್ ಭಾರತ್ ಮಾತಾ ಸಭಾಭವನದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಮ್.ಕೆ ಮಕ್ಕಳೊಂದಿಗೆ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.


ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ಅರವಿಂದ ಕುಮಾರ್, ಜಯಂತಿ, ರಜನಿ ಎಂ.ಆರ್, ಕಾರ್ಯದರ್ಶಿ ತಾರಾನಾಥ ನಾಯ್ಕ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಸುಪ್ರಿತಾ ಎಸ್ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳು ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.


ಕಾರ್ಯದರ್ಶಿ ತಾರಾನಾಥ ನಾಯ್ಕ ಮಕ್ಕಳನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿದರು ಹಾಗೂ ಅಧ್ಯಕ್ಷರು ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಎಸ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಗ್ರಂಥಾಲಯ ಮೇಲ್ವಿಚಾರಕರಾದ ಹರ್ಷಿತಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿದರು. ಶಿಬಿರವು ಮೇ ೧೪ರಿಂದ ಮೇ ೨೦ರ ವರೆಗೆ ನಡೆಯಲಿರುವುದು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!