ಕಕ್ಕೆಪದವು: 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ನಿಯಮ ಪಾಲನೆ ಹಾಗೂ ಕಲಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವುದು ಈ ಸಭೆಯ ಉದ್ದೇಶವಾಗಿತ್ತು. ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕ – ರಕ್ಷಕ ಸಭೆಯು ಮೇ 15ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ವಿಜಯ ಕೆ ಇವರು ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಮತ್ತು ಮಕ್ಕಳ ಉನ್ನತಿಗೆ ಬೇಕಾದ ಉತ್ತಮ ಮಾಹಿತಿಗಳನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಹಾಗೂ ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಪೋಷಕರಿಗೆ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಈ ಸಭೆಯಲ್ಲಿ ಚರ್ಚಿಸಿದರು.
ಸಭೆಯಲ್ಲಿ ಎಸ್ ಎಸ್ ಎಲ್ ಸಿ ಪೋಷಕರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹಶಿಕ್ಷಕಿಯರಾದ ಸಂಗೀತ ಕಾರ್ಯಕ್ರಮವನ್ನು ನಿರೂಪಿಸಿ , ಸಹಶಿಕ್ಷಕಿ ದಿವ್ಯಶ್ರೀ ವಂದಿಸಿದರು.