29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

ಉಜಿರೆ: ಎಸ್‌.ಡಿ.ಎಂ ವತಿಯಿಂದ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮೇ. 16 ರಂದು ನಡೆಯಿತು.

ಕಾನೂನು ಮತ್ತು ನ್ಯಾಯ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ಸಮಾರೋಷ ಭಾಷಣ ಮಾಡಿದರು.

ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್, ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಸಮ್ಮೇಳನದ ಸಂಯೋಜಕ ಡಾ.ನವೀನ್, ಉಜಿರೆ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಉತ್ತರ ಪ್ರದೇಶ ಹಾಗೂ ಆಂಧ್ರಪ್ರದೇಶದ ವಿದ್ಯಾರ್ಥಿಗಳು ಮತ್ತು ಡಾ.ಸುಲೇಖಾ ವರದ್ ರಾಜ್ ಸಮ್ಮೇಳನದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಜಿಂದಾಲ್ ಚೀಫ್ ಮೆಡಿಕಲ್ ಆಫಿಸರ್ ಡಾ.ಭಬಿನಾ,ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಪ್ರಸ್ತಾಪಿಸಿ, ಸ್ವಾಗತಿಸಿದರು. ಡಾ.ಸಂದೇಶ್ ಹುತಾತ್ಮರಾದ ಭಾರತೀಯ ಸೇನೆಯ ವೀರ ಸೈನಿಕರಿಗೆ ನಮನ ಸಲ್ಲಿಸಿದರು. ಉಪ ಪ್ರಾಂಶುಪಾಲರಾದ ಡಾ.ಸುಜಾತ ವಂದಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya
error: Content is protected !!