24.2 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

ಬೆಳ್ತಂಗಡಿ: ಬಂದಾರು ಗ್ರಾಮದ ಮದುವೆ ಮನೆಯೊಂದರ ಆರತಕ್ಷತೆ ಊಟ ಸೇವಿಸಿ ವಾಂತಿ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಆರತಕ್ಷತೆ ಊಟ ಮಾಡಿದ ಬಹುತೇಕ ಮಂದಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ 5 ಮಂದಿಯ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆ ಸಮಾರಂಭಕ್ಕೆ ಆಗಮಿಸಿದ ವ್ಯಕ್ತಿಗಳು ವಾಂತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎನ್ನಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಬಂದಾರಿನ ಸುಮಾರು 40 ಹೆಚ್ಚು ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಅರತಕ್ಷತೆಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನ ಸೇವಿಸಿದ ಮಂದಿ ಅಸ್ವಸ್ಥರಾಗುತ್ತಿದ್ದು ಘಟನೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ. ವಧು ವರರನ್ನು ಆಶೀರ್ವಾದಿಸಲು ಬಂದವರಿಗೆ ಈ ರೀತಿ ನಡೆಯಿತಲ್ಲ ಎಂದು ಮದುವೆ ಮನೆಯವರು ದುಃಖ ಪಡುತ್ತಿದ್ದಾರೆ ಎನ್ನಲಾಗಿದೆ.

Related posts

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!