30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

ಚಾರ್ಮಾಡಿ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಕಕ್ಕಿಂಜೆ ಶಾಖೆಯ ಉದ್ಘಾಟನೆಯು ಮೇ 16 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ನಡೆಯಿತು.

ಶಾಖಾ ಕಛೇರಿ ಉದ್ಘಾಟನೆಯನ್ನು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷ ಎಸ್. ಜಯರಾಮ ಶೆಟ್ಟಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯಾರು ವಹಿಸಿದರು.

ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕ ಕೆ. ಅನಂತರಾಮ್ ರಾವ್ ನೆರವೇರಿಸಿ, ಶುಭಹಾರೈಸಿದರು. ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದ ಎ., ತೋಟತ್ತಾಡಿ ಸೈಂಟ್ ಅಂಥೋನಿ ಪೊರೇನ್ ಚರ್ಚ್ ನ ಟ್ರಸ್ಟಿ ಶಾಜಿ ತೊಪ್ಪಿಲ್, ಕಕ್ಕಿಂಜೆ ಮೊಹಿದ್ದಿನ್ ಜುಮಾ ಮಸೀದಿಯ ಅಧ್ಯಕ್ಷ ಇಸ್ಮಾಯಿಲ್ ಜಿ., ಚಾರ್ಮಾಡಿ ಶ್ರೀ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪ್ರಕಾಶ ಹೊಸಮಠ, ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ. ವಿನಯಚಂದ್ರ, ಚಾರ್ಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರುಗಳಾದ ಎಸ್. ಜಯರಾಮ್ ಶೆಟ್ಟಿ, ಎಂ. ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಹೆಚ್, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ, ಎಂ. ಜಯರಾಮ ಭಂಡಾರಿ, ಪುರಂದರ ಶೆಟ್ಟಿ, ಮಂಜುನಾಥ್ ರೈ, ರಾಜು ಶೆಟ್ಟಿ, ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ನವಶಕ್ತಿ, ಪ್ರಕಾಶ್ ಶೆಟ್ಟಿ ನೊಚ್ಚ, ಶ್ರೀಮತಿ ಸಾರಿಕ ಶೆಟ್ಟಿ, ಶ್ರೀಮತಿ ವಿಜಯ ಬಿ ಶೆಟ್ಟಿ, ಶಾಖಾ ಪ್ರಬಂಧಕ ಅಜಿತ್ ಕುಮಾರ್ ಮತ್ತು ಸಿಬ್ಬಂದಿ ವರ್ಗ, ಸದಸ್ಯರು ಉಪಸ್ಥಿತರಿದ್ದರು.

ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya
error: Content is protected !!