September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಸಿಬ್ಬಂದಿ ಸ್ಪಂದನಾ ಎಮ್.ಎಸ್. ರವರಿಗೆ ಬೀಳ್ಕೊಡುಗೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!