ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶೈಕ್ಷಣಿಕ ಸಾಧಕಿಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.