ನೆರಿಯ : ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಹಾಗೂ “ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್” ಇವರ ಸಂಯುಕ್ತ ಆಶ್ರಯದಲ್ಲಿ “ಜನಜಾತಿಯ ಗೌರವ ದಿವಸ್ “ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಗೌರವ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಇಂದು ಬಾಂಜಾರು ಸಮುದಾಯ ಭವನದಲ್ಲಿ ಮೇ 16 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕೃಷ್ಣಮೂರ್ತಿ ಚಿಫ್ ಎಕ್ಸಿಕ್ಯೂಟಿವ್ ಸಿಸಿ ಎಂ ಆರ್ ಪಿ ಎಲ್ ನೆರವೇರಿಸಿ ಮಾತನಾಡಿ ವನವಾಸಿ ಜನನಾಯಕ ಭಗವಾನ್ ಬಿರ್ಸಾ ಮುಂಡ ಅವರ 150 ನೇ ಜನ್ಮವಾರ್ಷಿಕೊತ್ಸವದ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಬಾಂಜಾರಿನ ಜನರಿಗೆ ಇಂತಹ ಉಚಿತ ಆರೋಗ್ಯ ತಪಾಸಣೆ ಶಿಬಿರವು ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ,ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಸಹಕಾರಿಯಾಗಲಿದೆ ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ ಮುರಳಿಕೃಷ್ಣ ಇರ್ವತ್ರಾಯ ಬಿರ್ಸಾ ಮುಂಡಾ ಅವರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಆರೋಗ್ಯ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ಸಮುದಾಯದ ತಮ್ಮ ಮಕ್ಕಳನ್ನು ಉನ್ನತ ವಿದ್ಯಾಭ್ಯಾಸ ಕೊಡಿಸಿ ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪಿಸಬೇಕು ಮತ್ತು ಶಿಬಿರದ ಸೌಲಭ್ಯಗಳು ಮಾಹಿತಿ ನೀಡಿದರು,ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮನ್ಶರ್ ಪ್ಯಾರಮೇಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಎಂ ಮರ್ದಳ ಮಾತನಾಡಿ ಇಂತಹ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತದೆ, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ವಂದನಾ ಎಂ ಇರ್ವತ್ರಾಯ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಅಲ್ಬಿನ್ ಜೊಸೇಫ್, ಆಡಳಿತಾಧಿಕಾರಿ ಜ್ಯೋತಿ ವಿ ಸ್ವರೂಪ್, ನೆರಿಯ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಬಿ ಎಸ್ ಬಾಂಜಾರು, ಹಾಗೂ ಸ್ಥಳೀಯರಾದ ನವೀನ್ ಬಿ.ಎಸ್ ಬಾಂಜಾರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮನ್ಶರ್ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸಹಕರಿಸಿದರು. ಸುಮಾರು ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.