September 6, 2026
ನಿಧನ

ಧರ್ಮಸ್ಥಳದ ಯುವತಿ,ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ:ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ.

ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಾರಾಯಣ ಪೂಜಾರಿಯವರ ಧರ್ಮಪತ್ನಿ ಪ್ರೇಮ ನಿಧನ

Suddi Udaya

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!