26.3 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ಧರ್ಮಸ್ಥಳದ ಯುವತಿ,ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ:ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ.

ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಕಲ್ಕಣಿಯಲ್ಲಿ ರಸ್ತೆ ಅಪಘಾತಬೈಕ್ ಸವಾರ ಸಯ್ಯದ್ ಪಾಶ ಮೃತ್ಯು

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
error: Content is protected !!