24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

ಬೆಳ್ತಂಗಡಿ: ಪಂಜಾಬ್ ನ ಕಾಲೇಜೊಂದರ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಧರ್ಮಸ್ಥಳದ ಬೋಳಿಯಾರ್ ನಿವಾಸಿ ಆಕಾಂಕ್ಷ ಪ್ರೇಮ ವೈಫಲ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿಗಳ ಪುತ್ರಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಎಸ್ ನಾಯರ್ (22) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ಸಂಜೆ ನಡೆದಿತ್ತು.
ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಜರ್ಮನ್ ಎರಡು ವರ್ಷದ ಕೋರ್ಸ್ ಗೆ ಹೋಗುವುದಕ್ಕೆ ಪಂಜಾಬ್ ಎಲ್.ಪಿ.ಯು ಪಗ್ವಾಡ ಕಾಲೇಜಿನಿಂದ ವಿದ್ಯಾಭ್ಯಾಸ ಮಾಡಿದ ಸರ್ಟಿಫಿಕೇಟ್ ಪಡೆಯಲು ತೆರಳಿದ ವೇಳೆ ನಿಗೂಢವಾಗಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು.

ಮಾಹಿತಿ ತಿಳಿದ ಪೋಷಕರು ಮಂಗಳೂರು ವಿಮಾನದ ಮೂಲಕ ದೆಹಲಿ ತಲುಪಿ ಬಳಿಕ ಮೇ.18 ರಂದು ಬೆಳಗ್ಗೆ ಪಂಜಾಬ್ ಗೆ ವಿಮಾನದ ಮೂಲಕ ಹೋಗಿ ಅಲ್ಲಿಂದ ವಾಹನದ ಮೂಲಕ ಮೇ.18 ರಂದು ಸಂಜೆ 6 ಗಂಟೆಗೆ ಪೋಷಕರು ಮೃತದೇಹ ಇರುವ ಪಂಜಾಬ್ ರಾಜ್ಯದ ಜಲಂದರ್ ಜಿಲ್ಲೆಯ ಪಾಡ ಸಿವಿಲ್ ಸರಕಾರಿ ಆಸ್ಪತ್ರೆಗೆ ತಲುಪಿದ್ದರು. ಬಳಿಕ ಪ್ರಕರಣದ ಬಗ್ಗೆ ಜಲಂದರ್ ಪೊಲೀಸ್ ಠಾಣೆಯಲ್ಲಿ ಸಹೋದರ ಆಕಾಶ್ ನಾಯರ್ ದೂರು ನೀಡಿದ್ದು, ಆಕಾಂಕ್ಷ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾಲೇಜಿನ ಪ್ರೊಫೆಸರ್ ಒಬ್ಬರನ್ನು ಪ್ರೇಮಿಸುತ್ತಿದ್ದಳು ಎನ್ನಲಾಗಿದೆ. ಯಾವುದೋ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು ಇದರಿಂದ ನೊಂದು ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಎಂದು ತಿಳಿದು ಬಂದಿದ್ದು, ಈ ಬಗ್ಗೆ ಮೊಬೈಲಿನಲ್ಲಿ ವಿವರ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ಪ್ರಚೋದಿಸಿದ ಪ್ರೊಫೆಸರ್ ವಿರುದ್ಧ ಪೋಷಕರು ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya
error: Content is protected !!