38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲದಲ್ಲಿ ಮೇ 13ರಿಂದ ಪ್ರಾರಂಭಗೊಂಡು ಮೇ 21 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಜರುಗಲಿದೆ.

ಮೇ 18 ರಂದು ಅಂಗಣೋತ್ಸವ, ರಾತ್ರಿ “ಮಹಾ ರಥೋತ್ಸವ”, ಕವಾಟ ಬಂಧನ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀನಿವಾಸ ಮೂಡೆತ್ತಾಯ ಮತ್ತು ಉತ್ಸವ ಸಮಿತಿ ಸದಸ್ಯರು, ಆಡಳಿತಾಧಿಕಾರಿ ದಿನೇಶ್ ಎಂ.
, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು (ಮೇ 19 ) ಪೂರ್ವಾಹ್ನ ಕವಾಟೋದ್ಘಾಟನೆ, ಮಹಾಪೂಜೆ ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭ್ರತೋತ್ಸವ, ಧ್ವಜ ಅವರೋಹಣ, ಪೂರ್ವಾಹ್ನ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ. ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya
error: Content is protected !!