24.1 C
ಪುತ್ತೂರು, ಬೆಳ್ತಂಗಡಿ
May 21, 2025
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!