ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

ಬೆಳ್ತಂಗಡಿ: ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನತೆಗೆ ಉಚಿತ ಗ್ಯಾರಂಟಿಗಳ ಆಮಿಷ ಒಡ್ಡಿ, ಪ್ರಜಾಪ್ರಭುತ್ವ ವಿರೋಧಿ ನೀತಿಯ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರ್ತಿ ಮಾಡುತ್ತಿದೆ. ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿ ಉಚಿತಗಳ ಕಾರಣಕ್ಕೆ ಆರ್ಥಿಕವಾಗಿ ಆಗುವ ಹೊರೆಯ ಮುಂದಾಲೋಚನೆ ಮಾಡದ ಪರಿಣಾಮ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಆರೋಪಿಸಿದ್ದಾರೆ.

ಗ್ಯಾರಂಟಿಯ ಆರ್ಥಿಕ ಹೊರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಅಭಿವೃದ್ಧಿ ಶೂನ್ಯಕ್ಕೆ ಕಾರಣ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಳಗೆ ಬಿದ್ದರೂ ಮೀಸೆ ಮಣ್ಣು ಆಗಲ್ಲಿಲ್ಲ ಅಂತ ತಮ್ಮ ಆರ್ಥಿಕ ನೀತಿಯನ್ನು ಎಷ್ಟೇ ಸಮರ್ಥನೆ ಮಾಡಿದರೂ ಜನತೆಗೆ ವಾಸ್ತವ ಅರಿವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಎರಡುವರೆ ಲಕ್ಷ ಕೋಟಿ ಸಾಲ ಪಡೆದು ಅನುತ್ಪಾದಕ ವಿಷಯಗಳಿಗೆ ವೆಚ್ಚ ಮಾಡಿರುವುದೇ ರಾಜ್ಯ ಸರಕಾರದ ಸಾಧನೆ. ಕರ್ನಾಟಕ ದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿ ಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ. ದಿನ ಬೆಳಗಾದರೆ ಹೊಸ ತೆರಿಗೆಯ ಹೊರೆ ಬೆಲೆಏರಿಕೆಯ ಬರೆ ಜನಜೀವನ ದುಸ್ತರ ಗೊಳಿಸಿದೆ. ಆಡಳಿತ ಪಕ್ಷದ ಶಾಸಕರ ಸರಕಾರ ವಿರೋಧಿ ಹೇಳಿಕೆಗಳು ಇದಕ್ಕೆ ಹಿಡಿದ ಕೈಗನ್ನಡಿ ಆಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ನೀಡಿದ ಭರವಸೆಯ ವರಸೆ ನೋಡಿದರೆ ರಾಜ್ಯದಲ್ಲಿ ರಾಮರಾಜ್ಯ ನಿರ್ಮಿಸಲಿದ್ದಾರೆ ಎಂದು ಅಂದುಕೊಂಡಿದ್ದೆವು. ಅಭಿವೃದ್ಧಿ ಕೆಲಸ ಮಾಡುತ್ತಾರೆ; ರೈತರ ಕಣ್ಣೀರು ಒರೆಸುತ್ತಾರೆ; ದೀನದಲಿತರ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ಅದ್ಯಾವ ಕೆಲಸವನ್ನೂ ಮಾಡಿಲ್ಲ. ಬದಲಾಗಿ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪರಿಶಿಷ್ಟರ ಹಿಂದುಳಿದವರ ಅಭಿವೃದ್ಧಿಗೆ ಇಟ್ಟ ಹಣವನ್ನೇ ನುಂಗಿ ನೀರು ಕುಡಿದ್ದಿದ್ದಾರೆ. ಕಾಂಗ್ರೆಸ್ ಸರಕಾರ ಬ್ರಾಂಡ್ ಬೆಂಗಳೂರನ್ನು ನೀರಲ್ಲಿ ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ಮುಳುಗಿಸಿದೆ.

ರಾಜ್ಯದ ಕಾನೂನು ಪರಿಸ್ಥಿತಿ ಕೋಮಾ ಸ್ಥಿತಿಗೆ ತಲುಪಿದೆ. ಸಮಾಜಘಾತುಕ, ಭಯೋತ್ಪಾದಕ ಶಕ್ತಿಗಳ ವಿಜೃಂಭಣೆ ನೋಡುವಾಗ ಸರಕಾರ ಜೀವಂತ ಇದೆಯೋ ಸತ್ತಿದೆಯೋ ಅನ್ನುವ ಅನುಮಾನ ಬರುತ್ತದೆ. ಗೃಹಮಂತ್ರಿಗಳ ವಿಚಿತ್ರ ಹೇಳಿಕೆಗಳು ಸರಕಾರದ ನಂಪುಸಕತೆಗೆ ಸಾಕ್ಷಿ ಆಗಿದೆ. ಒಟ್ಟಾರೆ ರಾಜ್ಯದ ಕಾಂಗ್ರೆಸ್ ಸರಕಾರದ ಎರಡು ವರ್ಷದ ಆಡಳಿತ ನೋಡುವಾಗ ಯಾಕಾದರೂ ಇವರನ್ನು ಅಧಿಕಾರಕ್ಕೆ ತಂದೆವೋ ಅಂತ ಜನತೆ ಪಶ್ಚತ್ತಾಪ ಪಡುವಂತೆ ಆಗಿದೆ. ಕಾಂಗ್ರೆಸ್ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಅರ್ಥ ಆಗುತ್ತಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya
error: Content is protected !!