September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಾರತೀಯ ಜೀವ ನಿಗಮ ಪ್ರಬಂಧಕ ಕೆ. ಪ್ರಕಾಶ್ ಭಾಗವಹಿಸಿದ್ದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಧರಣೇಂದ್ರ ಕೆ. ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ, ನಿವೃತ್ತ ಶಿಕ್ಷಕರಾದ ಪಂಚಾಕ್ಷರಪ್ಪ, ಸೀತಾರಾಮ ಗೌಡ, ಕೃಷ್ಣಪ್ಪ ನಾಯ್ಕ, ವಿದ್ಯಾ ಕುಮಾರಿ ಪಿ, ಲಿಯೋ ನೋರನ್ಹ ರವರನ್ನು ಹಾಗೂ ಬ್ಯಾಂಕಿನ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ವಸೂಲಾತಿ ಅಧಿಕಾರಿ ನವೀನ್ ಶೆಟ್ಟಿ, ಶಾಖ ಪ್ರಬಂಧಕ ಚೇತನ್ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕ ಧರಣೇಂದ್ರ ಕೆ. ಜೈನ್ ನಿರೂಪಿಸಿದರು. ಸಿಬ್ಬಂದಿ ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ವಂದಿಸಿದರು.

Related posts

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya
error: Content is protected !!