23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

ಮುಗೇರಡ್ಕ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಮೃತ ಮಹೋತ್ಸವದ ಮಹಾತ್ವಕಾಂಕ್ಷಿ ಯೋಜನೆಯಾದ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಶಿಕ್ಷಣ ಪ್ರಾರಂಭಕ್ಕೆ ದಕ್ಷಿಣ ಕನ್ನಡದ ಹಲವು ಅಂಗನವಾಡಿಗಳು ಆಯ್ಕೆಯಾಗಿದ್ದು, ಬೆಳ್ತಂಗಡಿಯ ಮೊಗ್ರು ಗ್ರಾಮದ ಮುಗೇರಡ್ಕ ಅಂಗನವಾಡಿಯೂ ಆಯ್ಕೆಯಾಗಿದೆ ಎಂದು ಬೆಳ್ತಂಗಡಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಸುಮನ ಎಸ್ ಅವರು ಮೊಗ್ರು ಅಂಗನವಾಡಿಯಲ್ಲಿ ನಡೆದ ಬಾಲವಿಕಾಸ ಸಮಿತಿ ಸಭೆಯಲ್ಲಿ ತಿಳಿಸಿದರು.

ಈ ವರ್ಷ ಜೂನ್ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗಿ ಅಂಗನವಾಡಿಗಳನ್ನು ಬಲಪಡಿಸುವ ಹಾಗೂ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಇಂಗ್ಲಿಷ್ ಭಾಷಾ ತರಬೇತಿಗೆ ಪೂರಕವಾದ ಎಲ್ ಕೆಜಿ ಗೆ 4 ವರ್ಷದ ಮಕ್ಕಳು ಹಾಗೂ ಯುಕೆಜಿ ಗೆ 5 ವರ್ಷ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು, ಆಯ್ಕೆಯಾದ ಅಂಗನವಾಡಿ ವ್ಯಾಪ್ತಿಯ ಮಕ್ಕಳು ಹಾಗೂ ಹತ್ತಿರದ ಮಕ್ಕಳು ಪ್ರವೇಶ ಪಡೆದು ಇದರ ಸದುಪಯೋಗ ಪಡೆಯಬಹುದು, ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಬೋಧನೆ ಹಾಗೂ ಆಹಾರ ಸರಕಾರದಿಂದ ಉಚಿತವಾಗಿ ಒದಗಿಸಲಾಗುವುದು ಎಂದರು.

ಉಚಿತ ವಾಹನ ವ್ಯವಸ್ಥೆ : ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರಿಂದ ಮೊಗ್ರು ಅಂಗನವಾಡಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆಯ್ದ ಸ್ಥಳಗಳಿಂದ ಉಚಿತವಾಗಿ ಮಕ್ಕಳ ಪ್ರಯಾಣಕ್ಕೆ ವಾಹನ ವ್ಯವಸ್ಥೆ ಒದಗಿಸಲಾಗುವುದು ಎಂದು ಟ್ರಸ್ಟ್ ಘೋಷಿಸಿದ್ದು, ಇದು ಸರಕಾರಿ ಸೌಲಭ್ಯಗಳನ್ನು ಬಲಪಡಿಸಲು ಟ್ರಸ್ಟ್ ನ ಪ್ರೇರಣೆ ಎಂದರು.

ಸಭೆಯಲ್ಲಿ ಮುಗೇರಡ್ಕ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭಾರತಿ, ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಸದಸ್ಯರಾದ ವೀರಪ್ಪ ಗೌಡ ಪರಕ್ಕಾಜೆ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಜ್ಯೋತಿ, ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಅಧ್ಯಕ್ಷ ಕುಶಾಲಪ್ಪ ಗೌಡ, ಕಾರ್ಯದರ್ಶಿ ಮನೋಹರ ಗೌಡ ಅಂತರ ಉಪಸ್ಥಿತರಿದ್ದರು.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!