23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಬ್ಯಾಂಕ್ ಮೂಲಕ ನಡೆಸುವ ವ್ಯವಹಾರಗಳ ದಾಖಲಾತಿ ನಿರ್ವಹಣೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ಅಂಶಗಳಲ್ಲಿ 109 ಪ್ರಮುಖ ಅಂಶಗಳನ್ನು ಗಮನಿಸಿದ ಲಂಡನ್‌ನ ಎನ್‌ಕ್ಯೂಎ (National Quality Assessment) ಸಂಸ್ಥೆ ಈ ಹಿಂದೆ 2024 ರಲ್ಲಿ ಗ್ರಾಮಾಭಿವೃದ್ಧಿ ಯೋಜನೆಗೆ ಕೊಡಮಾಡಿದ ಐಎಸ್‌ಒ 27001–2013 ಅನ್ನು ಮೇಲ್ದರ್ಜೆಗೇರಿಸಿದೆ.

ಐಎಸ್‌ಒ ಸಂಸ್ಥೆಯಲ್ಲಿ ಸುಮಾರು170 ದೇಶಗಳು ತಮ್ಮ ಸದಸ್ಯತ್ವವನ್ನು ಹೊಂದಿವೆ. ಎನ್‌ಕ್ಯೂಎ ಸಂಸ್ಥೆ90 ದೇಶಗಳ ಪ್ರತಿಷ್ಠಿತ ಸಂಸ್ಥೆಗಳನ್ನು ಐಎಸ್‌ಒಗಾಗಿ ಆಡಿಟ್ ಮಾಡುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯನ್ನು 38 ನಿಯಮಗಳು ಮತ್ತು 93 ರಲ್ಲಿ 90 ಅಂಶಗಳ ಕುರಿತು ಸೂಕ್ಷö್ಮವಾಗಿ ಗಮನಿಸಿ ಈ ಹಿಂದೆ ನೀಡಲಾದ ಐಎಸ್‌ಒ ಅನ್ನು ಇದೀಗ 27001–2022 ಆಗಿ ಮೇಲ್ದರ್ಜೆಗೇರಿಸಿದೆ.


ಜಿ. ಎಸ್. ಭಾರ್ಗವ್ ಅವರು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಹೆಗ್ಗಡೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಭಾರತ ದೇಶದಲ್ಲಿಯೇ ಐಎಸ್ಒ 27001–2022 ಪ್ರಮಾಣಪತ್ರ ಪಡೆದ ಚಾರಿಟೇಬಲ್ ಟ್ರಸ್ಟ್ಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊದಲಿಗ ಸಂಸ್ಥೆಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳ ನಿರ್ವಹಣೆಯ ಅತ್ಯುತ್ತಮ ಗುಣಮಟ್ಟದ ತಂತ್ರಜ್ಞಾನ, ಪಾರದರ್ಶಕತೆ, ಲೆಕ್ಕಾಚಾರಗಳು, ನಿಯಮಪಾಲನೆ ಮುಂತಾದ ಅನೇಕ ಪ್ರಮುಖ ವಿಷಯಗಳಲ್ಲಿ ವಿಶ್ವದರ್ಜೆಯ ಗುಣಮಟ್ಟವನ್ನು ಹೊಂದಿರುವುದಕ್ಕೆ ಈ ಪ್ರಮಾಣಪತ್ರ ಸಾಕ್ಷಿಯಾಗಿದೆ.


ಬ್ಯಾಂಕ್‌ಗಳ ವ್ಯವಹಾರಗಳ ಪಾರದರ್ಶಕತೆ, ನಿಖರತೆಯ ಉದ್ದೇಶದಿಂದ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಲ್ಲಾ ಬ್ಯಾಂಕ್‌ಗಳಿಗೆ ಐಎಸ್ ಒ 27001 ಮಾನ್ಯತೆಯನ್ನು ಪಡೆಯಲೇಬೇಕೆಂದು ನಿರ್ದೇಶಿಸಿದೆ. ಬ್ಯಾಂಕಿನ ಸೇವೆಗಳನ್ನು ಬ್ಯಾಂಕಿನ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಮೂಲಕ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಗ್ರಾಮ ಗ್ರಾಮಗಳಲ್ಲಿ ತರುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯು ಸ್ವಯಂಪ್ರೇರಿತವಾಗಿ ತನ್ನ ಸಂಸ್ಥೆಯನ್ನು ಈ ಉತ್ಕೃಷ್ಟ ಆಡಿಟ್‌ಗೆ ಒಳಪಡಿಸಿ ಈ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

Related posts

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya
error: Content is protected !!