23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ನಡೆಸಲಾದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮವು ಮೇ 20 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆ ವಹಿಸಿದರು. ಶಿರಹಟ್ಟಿ ಮಠದ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.

ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಹೇಮಾವತಿ ವೀ, ಹೆಗ್ಗಡೆ ಶುಭಾಶಂಸನೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್., ದ.ಕ. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಬೆಳ್ತಂಗಡಿ ತಾಲೂಕು ಜನಜಾಗೃತಿ ಅಧ್ಯಕ್ಷ ಕಾಸಿಂ ಎಂ., ಯೋಜನೆಯ ಶಾಂತಾರಾಂ ಪೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಉಪಸ್ಥಿತರಿದ್ದರು.


ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಆಶಯ ನುಡಿಗಳಾನ್ನಾಡಿದರು. ಶಂಕರಪ್ಪ ರಾಮದುರ್ಗ, ಶಶಿಕಲಾ ರಾಜು ಉಡುಪಿ, ಅಂಕಿತ ಶಿವಾನಂದ ಪಟ್ಟಣ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಪ್ರಾಥ೯ನೆ ಬಳಿಕ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ.ಪಾಯಸ್ ಸ್ವಾಗತಿಸಿದರು. ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾಯ೯ಕ್ರಮ ನಿರೂಪಿಸಿದರು. ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ವಂದಿಸಿದರು.
2900 ಮಂದಿ ವ್ಯಸನ ಮುಕ್ತರು ಸಮಾವೇಶದಲ್ಲಿ ಭಾಗವಹಿಸಿದರು.

Related posts

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya
error: Content is protected !!