ಬೆಳ್ತಂಗಡಿ: ವಿಶ್ವ ಡೆಂಗ್ಯೂ ದಿನಾಚರಣೆ 2025 ರ ಪ್ರಯುಕ್ತ ಆರೋಗ್ಯ ಇಲಾಖೆ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಕಲ್ಪತರು ಅರೆ ವೈದ್ಯಕೀಯ ಕಾಲೇಜು ಹಳೆಕೋಟೆ ಬೆಳ್ತಂಗಡಿ. ಇವರ ಸಹಯೋಗದಲ್ಲಿ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇಲ್ಲಿಂದ ಬೆಳ್ತಂಗಡಿ ಸಂತೆಕಟ್ಟೆ ಯವರೆಗೆ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ ಗೌಡ ಪ್ರಜ್ವಲ್ ಇವರು ಹಸಿರು ನಿಶಾನೆ ತೋರಿಸುವ ಮೂಲಕ ಕಾಲ್ನಡಿಗೆ ಜಾಥಕ್ಕೆ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಭವಾನಿ ಶಂಕರ್ ಇವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಡೆಂಗ್ಯೂ ರೋಗ – ಲಕ್ಷಣ – ಮುಂಜಾಗ್ರತ ಕ್ರಮ- ಸಾರ್ವಜನಿಕರ ಜವಾಬ್ದಾರಿಗಳನ್ನು ವಿವರಿಸಿದರು. ನಂತರ ಕಾಲ್ನಡಿಗೆ ಜಾಥಾವು ಬೆಳ್ತಂಗಡಿ ನಗರದ ಮುಖ್ಯ ಬಸ್ಸು ನಿಲ್ದಾಣ ಹಾಗೂ ಮುಖ್ಯ ರಸ್ತೆಯಲ್ಲಿ ಸಾಗಿ ಸೋಮವಾರದ ಸಂತೆಯ ನಡುವೆ ಹಾದು ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿನ ಬಸ್ಸು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ಕೋನೆಗೊಂಡಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಅರೋಗ್ಯಧಿಕಾರಿ, ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಸಿಬ್ಬಂದಿ ವೃಂದ, ಕಲ್ಪತರು ಅರೆವೈದ್ಯಕೀಯ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವೃಂದ, ಆರೋಗ್ಯ ಇಲಾಖೆಯ ಎಲ್ಲಾ ಆರೋಗ್ಯ ಕೇಂದ್ರದ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಅರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಣ ಸಿಬ್ಬಂದಿ ಹಾಗೂ ತಾಲೂಕು ಆರೋಗ್ಯಧಿಕಾರಿ ಕಚೇರಿಯ ಎಲ್ಲಾ ಮೇಲ್ವಿಚಾರಣ ಸಿಬ್ಬಂದಿಗಳು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದರು. ಶ್ರೀ ಅಜಯ್ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು, ಕಾರ್ಯಕ್ರಮವನ್ನು ನಿರೂಪಣೆ ಮಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ ಧನ್ಯವಾದಗಳನ್ನು ಸಲ್ಲಿಸಿದರು. ಅತಿ ಮುಖ್ಯವಾಗಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರೀ ಅರ್ಜುನ್ ಮತ್ತು ಸಿಬ್ಬಂದಿ ವೃಂದ ಈ ಕಾಲ್ನಡಿಗೆ ಜಾಥಾವು ಯಶಸ್ವಿಯಾಗಲು ಸಹಕರಿಸಿದರು