ಬೆಳ್ತಂಗಡಿ: ತಾಲೂಕಿನ ಸರ್ವಜನರಿಗೆ ಟ್ರಸ್ಟ್ ಸರ್ವ ವ್ಯಾಪಿಯಾಗಬೇಕು. ಸರ್ವಜಾತಿ, ಸಮುದಾಯದ ಬಂಧುಗಳ ಕೈಗೆ ಸಹಾಯಸ್ತ ಒದಗಿಸಲು ಆಂಬುಲೆನ್ಸ್ ಸೇವೆಯನ್ನು ಲೋಕರ್ಪಾಣೆ ಮಾಡಲಿದ್ದೇವೆ. ಟ್ರಸ್ಟ್ ಪದಗ್ರಹಣ ಸಮಾರಂಭ, ಅಶಕ್ತರಿಗೆ ನೆರವು, ನಿವೃತ್ತ ಸೈನಿಕರಿಗೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಲಿದ್ದು ಗಣ್ಯತಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮಂಜ ಹೇಳಿದರು.
ಅವರು ಮೇ 20 ರಂದು ಬೆಳ್ತಂಗಡಿ ಚರ್ಚ್ ರೋಡ್ ಸಿವಿಸಿ ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮಂಗಳೂರು ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶ್ರೀ, ಡಾ| ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ ಆರ್ಶೀವಚನ ನೀಡಲಿರುವರು, ಮಂಗಳೂರು ದ.ಕ.ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷ ಡಿ.ಬಿ.ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರು, ಚೆನ್ನರಾಯಪಟ್ಟಣ ಶಾಸಕ ಸಿ.ಎನ್ ಬಾಲಕೃಷ್ಣ, ಬೆಂಗಳೂರು ನವೀಕರಿಸಬಹುದಾದ ಇಂಧನಗಳ ನಿಗಮ ಅಧ್ಯಕ್ಷ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಸಂಸದ ಪ್ರತಾಪ್‌ಸಿಂಹ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗರ ಸಂಘ ನಿರ್ದೇಶಕ, ಚಲನಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ, ರಾಜ್ಯ ಒಕ್ಕಲಿಗರ ಸಂಘ ಉಪಾಧ್ಯಕ್ಷ ರೇಣುಕಾಪ್ರಸಾದ್ ಕೆ.ವಿ. ಸಹಿತ ಗಣ್ಯತಿ ಗಣ್ಯರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷ ರಂಜನ್ ಜಿ.ಗೌಡ ಬೆಳ್ತಂಗಡಿ ಮತ್ತು ಕೆ.ವಿಜಯ ಗೌಡ, ವೇಣೂರು, ಕಾರ್ಯಾಧ್ಯಕ್ಷ ಶ್ರೀನಿವಾಸ್ ಗೌಡ ಬೆಳಾಲು , ಕಾರ್ಯದರ್ಶಿ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಸ್ಥಾಪಕ ಟ್ರಸ್ಟಿಗಳಾದ ನವೀನ್ ಗೌಡ ಬಿ.ಕೆ. ನಿಡ್ಲೆ, ವಸಂತ ಗೌಡ ಮರಕಡ ಮಚ್ಚಿನ, ಟ್ರಸ್ಟಿಗಳಾದ ರಾಜೇಶ್, ಸುಂದರ ಗೌಡ ಉಡ್ಯೇರೆ ಹತ್ಯಡ್ಕ ಇದ್ದರು.