ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಗೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮವು ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾವ್ಯ ಗ್ರಾಮದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟಸ್ಟ್ ಸದಸ್ಯರು ಹಾಗೂ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.