23.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಚಾರ್ಮಾಡಿ: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮೇ22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ ಅರಿವು ಮೂಡಿಸಲು ಸಂಬಂಧ ಸ್ಪಷ್ಟ ಆದೇಶ ಹೊರಡಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನಾ ಪತ್ರ ಮೇ22 ರಂದು ಸಂಜೆ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!