ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗದ ರೋಷವನ್ನು ವ್ಯಕ್ತಪಡಿಸಿತು. ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.
ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ.ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವನ್ಯಜೀವಿಗಳು ಮಾನವ ಸಂಪರ್ಕದಿಂದ ತೀವ್ರ ಒತ್ತಡಕ್ಕೆ ಒಳಗಾಗುತ್ತವೆ. ಈ ತರಹದ ವರ್ತನೆ ಮುಂದಿನ ದಿನಗಳಲ್ಲಿ ದುರಂತಗಳಿಗೆ ದಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ.