ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಧರ್ಮಸ್ಥಳ ಮುಂಡ್ರುಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಲಾಯಿತು.
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ ಪ್ರಿಂಟರನ್ನು ಮುಖ್ಯೋಪಾಧ್ಯಾಯಿನಿ ಚಿತ್ರಪ್ರಭಾ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರುಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.