27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

ಮಂಗಳೂರು,ಮೇ 22,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆಗೆ ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್ ಸಿಎಸ್ಆರ್ ನಿಧಿ ಯಿಂದ ನೀಡಲಾಗಿರುವ ನೋಟ್ ಬುಕ್ ಹಸ್ತಾಂತರ ಹಾಗೂ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರ ವಿತರಣಾ ಕಾರ್ಯಕ್ರಮ ಮೇ 23 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ನೋಟ್ ಬುಕ್ ಹಸ್ತಾಂತರ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಯತೀಶ್ ಎನ್ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರ ವಿತರಣೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ಸೈಟ್ ಡೈರೆಕ್ಟರ್ ಶ್ರೀನಿವಾಸ್ ಪ್ರಾಣೇಶ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಕುತ್ಲುರು ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಗೌರವ ಉಪಸ್ಥಿತರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya
error: Content is protected !!