ಬೆಳ್ತಂಗಡಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ, ಗ್ರಾಮ ಪಂಚಾಯತ್ ಅರಸಿನಮಕ್ಕಿ, ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಶಾಖೆ, ರೋಟರಿ ಕ್ಲಬ್ ಬೆಳ್ತಂಗಡಿ, ಕೆ.ವಿ.ಜಿ ದಂತ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, (ಅಂಧತ್ವ ನಿವಾರಣ ವಿಭಾಗ) ಮಂಗಳೂರು ಡಾ|| ಪಿ ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚೂರಿ ಗ್ರೂಪ್, ಬೆಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಸೇವಾಭಾರತಿ ಕನ್ಯಾಡಿ ಮತ್ತು ಶ್ರೀದೇವಿ ಆಪ್ಟಿಕಲ್ಸ್ ಉಪ್ಪಿನಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಮೇ. 25 ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ನಡೆಯಲಿದೆ.
ಹತ್ಯಡ್ಕ ಸಹಕಾರಿ ಸಂಘದ ವ್ಯಾಪ್ತಿಯ ಹತ್ಯಡ್ಕ, ರೆಖ್ಯ, ಶಿಶಿಲ, ಶಿಬಾಜೆ ಗ್ರಾಮದ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ತಿಳಿಸಿದ್ದಾರೆ.