ಬೆಳ್ತಂಗಡಿ: ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಡೀಸೆಲ್ ಕದ್ದ, ಟ್ಯೂಬ್ ಲೈಟ್ ಹೊಡೆದ ಕಂಟ್ರಿ ಬ್ಯಾರಿಗಳು ಎಂದು ಹರೀಶ್ ಪೂಂಜ ಹೇಳಿಕೆಗೆ ದಾಖಲಾಗಿರುವ ಎಫ್ ಐ ಆರ್ ಮತ್ತು ನಂತರ ಕಾನೂನು ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ಹರೀಶ್ ಪೂಂಜ ರವರು ಸಲ್ಲಿಸಿದ ಅರ್ಜಿ ವಿಚಾರಣೆಗೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು. ಈ ದೂರನ್ನು ರದ್ದುಗೊಳಿಸಬೇಕೆಂದು ಹರೀಶ್ ಪೂಂಜ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಅರ್ಜಿ ವಿಚಾರಣೆಗೆ ಬಂದಿದ್ದು, ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನ ಮುಂದೂಡಿ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ.
ವಾದ-ಪ್ರತಿವಾದ ಆಲಿಸಿದ ಕೋರ್ಟ್, ಹರೀಶ್ ಪೂಂಜಾ ವಿರುದ್ಧ ಕೋಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ, ಜೂ.18ಕ್ಕೆ ವಿಚಾರಣೆ ಮುಂದೂಡಿತು.
ಹರೀಶ್ ಪೂಂಜರ ಪರವಾಗಿ ವಕೀಲರಾದ ಪ್ರಸನ್ನ ದೇಶಪಾಂಡೆ ಹಾಗೂ ರೋಹಿತ್ ಗೌಡ ವಾದಿಸಿದರು.