ಉಜಿರೆ: ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಕ್ ಎಕ್ಸಲೆನ್ಸ್ ವ್ಯವಸ್ಥಾಪಕಿ ಗಂಗೋತ್ರಿ ಎಸ್.ಜಿ ಹಾಗೂ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಹಿರಿಯ ಪ್ರದೇಶ ವ್ಯವಸ್ಥಾಪಕ ಅಬೂಬಕರ್ ನಾಯಕ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.
ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.