23.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

ಉಜಿರೆ: ಮಾಜಿ ಸೈನಿಕರ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ದೇಶದ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ಮಾತ್ರ ದೊರಕುವಂತಹ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ (ECHS) ವ್ಯವಸ್ಥೆಗೆ ಬೆನಕ ಆಸ್ಪತ್ರೆ ಸೇರಿಕೊಂಡಿದ್ದು ಇದರ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮವು ಮೇ.22ರಂದು ಬೆನಕ ಆಸ್ಪತ್ರೆಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಕರ್ನಲ್ ನಿತಿನ್ ಭಿಡೆ ನೆರವೇರಿಸಿದರು. ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಭಟ್ ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬರ ಕೊಡುಗೆಯೂ ಆಸ್ಪತ್ರೆಯ ಬೆಳವಣಿಗೆಗೆ ಸಹಕಾರಿಯಾಗಿದೆ. ದೇಶ ಕಾಯುವ ಯೋಧನ ಹಾಗೆಯೇ ದೇಹ ಕಾಯುವ ವೈದ್ಯರ ಸೇವೆಯು ಸಮಾಜಕ್ಕೆ ಅಮೂಲ್ಯವಾಗಿದೆ ಎಂದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ನಿತಿನ್ ಭಿಡೆ, ವೈದ್ಯಕೀಯ ಆರೈಕೆಯ ಅಗತ್ಯ ಇರುವ ರೋಗಿಗಳಿಗೆ ಸರಿಯಾದ ರೀತಿಯ ಸೇವೆ ನೀಡಿದರೆ ಮಾತ್ರ ಆಸ್ಪತ್ರೆಯು ಜನಾನುರಾಗಿಯಾಗಿರುತ್ತದೆ ಎಂಬುದಕ್ಕೆ ಬೆನಕ ಆಸ್ಪತ್ರೆ ಸಾಕ್ಷಿಯಾಗಿದೆ. ವೈದ್ಯರು ರೋಗಿಗಳ ಅವಶ್ಯಕತೆ ಬಗ್ಗೆ ಹಾಗೂ ರೋಗಿಗಳು ವೈದ್ಯರ ಕಾಳಜಿ ಬಗ್ಗೆ ಸರಿಯಾಗಿ ಅರ್ಥಮಾಡಿಕೊಂಡು ಸೇವೆ ನೀಡುವ ಅನಿವಾರ್ಯತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಕರ್ನಲ್ ನಿತಿನ್ ಭಿಡೆ, ವಾಯುಸೇನೆಯ ನಿವೃತ್ತ ಜೆ ಪಿ ಎಮ್ ಚೆರಿಯನ್ ಹಾಗೂ ಬೆಳ್ತಂಗಡಿ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮೊಹಮ್ಮದ್ ರಫಿರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರು ಮೇಜರ್ ಜನರಲ್ ಎಮ್ ವಿ ಭಟ್, ಕಾರ್ಯದರ್ಶಿ ಉಮೇಶ್ ಬಂಗೇರ, ಡಾ.ಗೋಪಾಲಕೃಷ್ಣ ಭಟ್ ರವರ ತಂದೆ ಸೀತಾರಾಮ್ ಭಟ್, ಡಾ. ಭಾರತಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆನಕ ಆಸ್ಪತ್ರೆಯ ಪಿಆರ್ ಒ ಎಸ್ ಜಿ ಭಟ್ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

Related posts

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!