23.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

ಬೆಳ್ತಂಗಡಿ: ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಡೀಸೆಲ್ ಕದ್ದ, ಟ್ಯೂಬ್ ಲೈಟ್ ಹೊಡೆದ ಕಂಟ್ರಿ ಬ್ಯಾರಿಗಳು ಎಂದು ಹರೀಶ್ ಪೂಂಜ ಹೇಳಿಕೆಗೆ ದಾಖಲಾಗಿರುವ ಎಫ್ ಐ ಆರ್ ಮತ್ತು ನಂತರ ಕಾನೂನು ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ಹರೀಶ್ ಪೂಂಜ ರವರು ಸಲ್ಲಿಸಿದ ಅರ್ಜಿ ವಿಚಾರಣೆಗೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.


ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು. ಈ ದೂರನ್ನು ರದ್ದುಗೊಳಿಸಬೇಕೆಂದು ಹರೀಶ್ ಪೂಂಜ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಅರ್ಜಿ ವಿಚಾರಣೆಗೆ ಬಂದಿದ್ದು, ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನ ಮುಂದೂಡಿ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ.


ವಾದ-ಪ್ರತಿವಾದ ಆಲಿಸಿದ ಕೋರ್ಟ್, ಹರೀಶ್ ಪೂಂಜಾ ವಿರುದ್ಧ ಕೋಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ, ಜೂ.18ಕ್ಕೆ ವಿಚಾರಣೆ ಮುಂದೂಡಿತು.
ಹರೀಶ್ ಪೂಂಜರ ಪರವಾಗಿ ವಕೀಲರಾದ ಪ್ರಸನ್ನ ದೇಶಪಾಂಡೆ ಹಾಗೂ ರೋಹಿತ್ ಗೌಡ ವಾದಿಸಿದರು.

Related posts

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya
error: Content is protected !!