ಬೆಳಾಲು: ಗ್ರಾಮೀಣ ಮಕ್ಕಳಿಗಾಗಿ ಬೆಳಾಲು ಗ್ರಾಮ ಪಂಚಾಯಿತ್ ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಮೇ15 ರಿಂದ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರ ಅಧ್ಯಕ್ಷತೆಯಲ್ಲಿ ಮೇ 22 ರಂದು ನಡೆಯಿತು.
ವೇದಿಕೆಯಲ್ಲಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ ,ಬೆಳ್ತಂಗಡಿ ತಾಲೂಕು ಪಂಚಾಯಿತ್ ನರೇಗಾ ತಾಂತ್ರಿಕ ಸಹಾಯಕರಾದ ಶ್ರೀಮತಿ ರೇಷ್ಮಾ ಹಾಗೂ ತಾಲೂಕು ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು ಉಪಸ್ಥಿತರಿದ್ದರು.
ಶಿಬಿರಾರ್ಥಿ ಚಾರ್ವಿ ಪ್ರಾರ್ಥಿಸಿ, ದೀಪ್ತಿ ಸ್ವಾಗತಿಸಿದರು. ದೀಕ್ಷಾ ಶಿಬಿರದ ಅನಿಸಿಕೆಯನ್ನು ಹೇಳಿದರು. ಶಿಬಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಅರಿವು ಕೇಂದ್ರದ ಮೇಲ್ವಿಚಾರಕರಾದ ಡೀಕಯ್ಯ ಗೌಡ ಅರಣೆಮಾರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.