ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.
ರಾಜ್ಯಕ್ಕೆ ತೃತೀಯ ರ‍್ಯಾಂಕ್ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.