27.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ


ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವ ಉದ್ದೇಶಕ್ಕಾಗಿ ಎರಡು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ. ಜಗದೀಶ್ ಪ್ರಸಾದ್ ಅವರು ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್‌ಗಳ ಆಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಅವಧಿಯಲ್ಲಿ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರ‍್ಸ್‌ಗಳ ಸಮಾವೇಶವನ್ನು ಸಂಘಟಿಸಿದ್ದರು. ಇವರು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆ ಗಳಿಸಿದ್ದಾರೆ.

Related posts

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya
error: Content is protected !!