ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ
“ಜನರ ಬಳಿಗೆ – ತಾಲೂಕು ಆಡಳಿತ ” ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಮೇ 27 ರಂದು ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ 40 ಜನ ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನದ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಇಲಾಖೆಯ ವಿವಿಧ ಸವಲತ್ತು ಸೌಲಭ್ಯಗಳ ವಿತರಣೆ ನಡೆಯಲಿದೆ.