29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರಾಗಿದ್ದಾರೆ.
ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು ಈ ವೇಳೆ ಪ್ರವೀಣ್ ಓಡಿ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ.

ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿದ್ದಾರೆ.

Related posts

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya
error: Content is protected !!