September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ರಿಕ್ಷಾ ಚಾಲಕ ಮುಂಡಾಜೆ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರಿಗೂ ಶಸ್ತ್ರಚಿಕಿತ್ಸೆ ನಡೆಸಬೇಕಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ 7 ಕಿಮೀ ವ್ಯಾಪ್ತಿಯ ರಸ್ತೆಯ ಸುಮಾರು 6 ಕಡೆಗಳಲ್ಲಿ ಕಿರು ಸೇತುವೆಗಳಿದ್ದು ಅವು ಅಗಲ ಕಿರಿದಾದ ಕಾರಣ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಕಳೆದ 7 ವರ್ಷಗಳ ಹಿಂದೆ ಈ ರಸೆ ವಿಸ್ತರಣೆಯಾಗಿದ್ದು ಈ ಸಮಯ ಈ ಕಿರುಸೇತುವೆಗಳ ಅಭಿವೃದ್ಧಿ ಕಾಮಗಾರಿ ನಡೆದಿರಲಿಲ್ಲ. ಇದರ ಬಳಿಕ ಜನಪ್ರತಿನಿಧಿ, ಇಲಾಖೆಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.


ಶಿಥಿಲ ಕಿರು ಸೇತುವೆಗಳಿರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಜಿಲ್ಲಾಧಿಕಾರಿ ಸಂಚಾರ ನಿಷೇಧವನ್ನು ಹೇಳಿದ್ದರು. ಆದರೂ ಈ ಅಪಾಯದ ಮಧ್ಯೆ ಇಲ್ಲಿ ವಾಹನ ಸಂಚಾರ ಯಾವುದೇ ಎಗ್ಗಿಲ್ಲದೆ ನಡೆಯುತ್ತಿತ್ತು.
ಇಲ್ಲಿನ ಕೆಲವು ಕಿರು ಸೇತುವೆಗಳು ಸಂಪೂರ್ಣ ಶಿಥಿಲವಾಸ್ಥೆ ತಲುಪಿದ್ದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ವಿಷ್ಣು ಭಟ್ ತಿಳಿಸಿದ್ದಾರೆ.

Related posts

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!