ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು ದೀಪ ಬೆಳಗಿಸುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಲ್ಲಿ ಮಾರ್ಗದರ್ಶನ ನೀಡಿದರು.
ಉಡುಪಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜ್ಞಾನವಿಕಾಸ ನಿರ್ದೇಶಕ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಪ್ರಾಂಶುಪಾಲರು ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಧಿಯಕಾರಿಗಳು ಭಾಗವಹಿಸಿದ್ದರು.