25.3 C
ಪುತ್ತೂರು, ಬೆಳ್ತಂಗಡಿ
May 24, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ 05 ರಿಂದ 19 ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್‌ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಉಪಾಧ್ಯಕ್ಷೆ ಶ್ರೀಮತಿ ವಿಜಯ ರಾಮಣ್ಣ, ಸದಸ್ಯ ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಜಾತ ಜಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಾದ ಕು. ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ ಸ್ವಾಗತಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ,ಎಲ್ ಸಿ ಆ‌ರ್ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕು| ಚಾರ್ವಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ತುಳಸಿ ದಿನೇಶ ಧನ್ಯವಾದವಿತ್ತರು.

Related posts

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!