ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾನಿಧ್ಯ ರಾವ್ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.
ಹಿಂದೆ 624 ಅಂಕಗಳನ್ನು ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಈಕೆ ಹಿಂದಿ ವಿಷಯದಲ್ಲಿ ಪರಿಷ್ಕೃತ 1 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ನಾರಾವಿಯ ವಸಂತ್ ಭಟ್ ಹಾಗೂ ಶ್ರೀಮತಿ ಸೌಜನ್ಯ ದಂಪತಿಯ ಪುತ್ರಿ.