ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ 05 ರಿಂದ 19 ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಉಪಾಧ್ಯಕ್ಷೆ ಶ್ರೀಮತಿ ವಿಜಯ ರಾಮಣ್ಣ, ಸದಸ್ಯ ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಜಾತ ಜಿ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳಾದ ಕು. ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ ಸ್ವಾಗತಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ,ಎಲ್ ಸಿ ಆರ್ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕು| ಚಾರ್ವಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ತುಳಸಿ ದಿನೇಶ ಧನ್ಯವಾದವಿತ್ತರು.