ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ,ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು.

ಮಂಗಳೂರು ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಿ ಇಡೀ ರಾಜ್ಯದಲ್ಲಿ ಒಕ್ಕಲಿಗ ಸಮಾಜ ಎರಡನೇ ಸ್ಥಾನದಲ್ಲಿದೆ. ಪೂರ್ವಚಿಂತನೆ ಮೂಲಕ ಸ್ವಾಭಿಮಾನ ಬೆಳೆಸಿಗೊಳ್ಳಬೇಕು.ವ್ಯಕ್ತಿಯ ಚಿಂತನೆ,ಸಮಾಜದ ಚಿಂತನೆ ಸಮಾಜಮುಖಿಯಾಗಿರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದ.ಕ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ.ಬಿ ಬಾಲಕೃಷ್ಣರವರು ವಹಿಸಿದ್ದರು.

ವೇದಿಕೆಯಲ್ಲಿ ಶೃಂಗೇರಿ ಶಾಸಕ,ನವೀಕರಿಸಬಹುದಾದ ಇಂಧನಗಳ ನಿಗಮ ಅಧ್ಯಕ್ಷ ಟಿ.ಡಿ ರಾಜೇಗೌಡ,ಮಾಜಿ ಸಚಿವ ಜೆ.ಗಂಗಾಧರ ಗೌಡ,ಮಾಜಿ ಶಾಸಕ ಸಂಜೀವ ಮಠಂದೂರು,ಶ್ರೀ ನಾಗನಾಥೇಶ್ವರ ಕ್ಷೇತ್ರ ಬೇಗೂರು ಇದರ ಧರ್ಮದರ್ಶಿ ನಾರಾಯಣ ಗೌಡ ಬೇಗೂರು,ಉಜಿರೆ ಒಕ್ಕಲಿಗ ಗೌಡರ ಮಹಿಳಾ ಸಂಘದ ಅಧ್ಯಕ್ಷ ಶ್ರೀಮತಿ ಅಪರ್ಣಾ ಶಿವಕಾಂತ್ ಗೌಡ,ಧಾರ್ಮಿಕ ಮುಖಂಡ ಕಿರಣ್ ಚ್ಚಂದ್ರ ಪುಷ್ಪಗಿರಿ,ಕಡಬ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸ್ಥಾಪಾಕಾಧ್ಯಕ್ಷ ಸುರೇಶ್ ಗೌಡ ಬೈಲು,ಮಂಗಳೂರು ಯುವ ಘಟಕದ ಅಧ್ಯಕ್ಷ ಕಿರಣ್ ಕುಮಾರ್ ಬಡ್ಲೆಗುತ್ತು,ಬೆಳ್ತಂಗಡಿ ಸ್ವಾಮಿ ಕನ್ಸ್ಟ್ರಕ್ಷನ್ ಕೆ.ಎಂ ನಾಗೇಶ್ ಕುಮಾರ್ ಗೌಡ,ಪುತ್ತೂರು ತಾಲೂಕು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ರವಿ ಗೌಡ ಮುಂಗ್ಲಿ ಮನೆ,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು,ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಶ್ರೀಮತಿ ಗಾಯತ್ರಿ ಮತ್ತು ನವೀನ್ ಗೌಡ ಕಾರ್ಯಕ್ರಮ ನಿರೂಪಿಸಿದರು.ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಗೌರವಾಧ್ಯಕ್ಷರಾದ ರಂಜನ್ ಜಿ ಗೌಡ ಬೆಳ್ತಂಗಡಿ, ಕೆ.ವಿಜಯ ಗೌಡ ವೇಣೂರು,ಕಾರ್ಯಾಧ್ಯಕ್ಷರಾದ ಶ್ರೀನವಾಸ ಗೌಡ ಬೆಳಾಲು,ಕೆ.ಜಯಂತ್ ಗೌಡ ಗುರಿಪಳ್ಳ,ಕಾರ್ಯದರ್ಶಿ ಭರತ್ ಗೌಡ ಬಂಗಾಡಿ,ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ,ಸ್ಥಾಪಕ ಟ್ರಸ್ಟಿಗಳಾದ ನವೀನ್ ಗೌಡ ಬಿ.ಕೆ ನಿಡ್ಲೆ,ವಸಂತ ಗೌಡ ಮರಕಡ ಮಚ್ಚಿನ,ದಾಮೋದರ ಗೌಡ ಸುರುಳಿ ಸಹಕರಿಸಿದರು.